ಪ್ರಲಾಪಗಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಅಧ್ಯಾಯವನ್ನು ನೋಡಿ |