Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ಆ ಯಾಜಕಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. ಅವರು ರಕ್ತದಿಂದ ಹೊಲಸಾಗಿದ್ದರು. ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು. ಅವರು ರಕ್ತದಿಂದ ತಮ್ಮನ್ನು ತಾವೇ ಕಲುಷಿತಗೊಳಿಸಿಕೊಂಡರು. ಆದ್ದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:14
15 ತಿಳಿವುಗಳ ಹೋಲಿಕೆ  

ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!


ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು