Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:17
15 ತಿಳಿವುಗಳ ಹೋಲಿಕೆ  

ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.


ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.


ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.


ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.


ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು