ಪ್ರಲಾಪಗಳು 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು; ನಮ್ಮ ಕೊನೆಯು ಬಂದಿತು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು. ಅಧ್ಯಾಯವನ್ನು ನೋಡಿ |