Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕೆಟ್ಟು ಅಲೆಯುತ್ತಾರೆ; ಚಿಕ್ಕತನದಿಂದಲೂ ಸಕಲಾತಿಯನ್ನು ಹೊದೆಯುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:5
17 ತಿಳಿವುಗಳ ಹೋಲಿಕೆ  

“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.


ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.


ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.


ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?


ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು