Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಈಗ] ಅವರ ಮುಖವು ಕಟ್ಟಕರಿದಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳ ಮೇಲೆ ಸುಕ್ಕಿಕೊಂಡಿದೆ, ಒಣಗಿ ಕಟ್ಟಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಈಗ ಅವರ ರೂಪವು ಕಲ್ಲಿದ್ದಲಿನಂತೆ ಕಪ್ಪಾಗಿದೆ. ಬೀದಿಗಳಲ್ಲಿ ಅವರು ಯಾರೆಂಬುದು ತಿಳಿಯಲಿಲ್ಲ. ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ. ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:8
17 ತಿಳಿವುಗಳ ಹೋಲಿಕೆ  

ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.


ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.


ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.


ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.


ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.


ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ


ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು