Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಸ್ವಾಸ್ತ್ಯವು ಪರರ ಪಾಲಾಗಿದೆ, ನಮ್ಮ ಮನೆಗಳು ಹೆರರ ಕೈಗೆ ಸಿಕ್ಕಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:2
13 ತಿಳಿವುಗಳ ಹೋಲಿಕೆ  

ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.


ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.


ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.


ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.


ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.


ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.


ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು