Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:21
19 ತಿಳಿವುಗಳ ಹೋಲಿಕೆ  

ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.


ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.


ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.


ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು