Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೋ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:14
13 ತಿಳಿವುಗಳ ಹೋಲಿಕೆ  

ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?


ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.


ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.


ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”


ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು.


ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.


ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು