ಪ್ರಸಂಗಿ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು. ಅಧ್ಯಾಯವನ್ನು ನೋಡಿ |