Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು. ಅವನು ತನ್ನ ವಿವೇಕಶೂನ್ಯವನ್ನು ಎಲ್ಲರಿಗೂ ಪ್ರಕಟಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:3
5 ತಿಳಿವುಗಳ ಹೋಲಿಕೆ  

ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.


ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.


ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.


ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು