Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:4
5 ತಿಳಿವುಗಳ ಹೋಲಿಕೆ  

ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು