Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:5
10 ತಿಳಿವುಗಳ ಹೋಲಿಕೆ  

ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.


ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.


ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.


ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು