Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಘನವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:6
11 ತಿಳಿವುಗಳ ಹೋಲಿಕೆ  

ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.


ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.


ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.


ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು