Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:6
15 ತಿಳಿವುಗಳ ಹೋಲಿಕೆ  

ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.


ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು