Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:8
32 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.


“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?


ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’


ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.


ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.


ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.


ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.


ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.


ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.


ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು