Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:9
41 ತಿಳಿವುಗಳ ಹೋಲಿಕೆ  

ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.


ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,


ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.


ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.


ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.


ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು