Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:1
40 ತಿಳಿವುಗಳ ಹೋಲಿಕೆ  

ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.


ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.


ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.


ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ಅವರ ಕೈ ಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.


ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.


ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು