ಪ್ರಸಂಗಿ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಷ್ಟದ ದಿನಗಳಲ್ಲಿ ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಮೊಬ್ಬಾಗುವವು; ಮಳೆಯಾದ ಮೇಲೆಯೂ ಮೋಡಗಳು ಮತ್ತೆ ಬರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ಮುದುಕನಾದಾಗ, ಸೂರ್ಯ, ಚಂದ್ರ, ನಕ್ಷತ್ರಗಳ ಬೆಳಕು ನಿನಗೆ ಕತ್ತಲೆಯಂತೆ ಕಾಣುತ್ತದೆ. ಮಳೆಯಾದ ಮೇಲೆಯೂ ಮತ್ತೆಮತ್ತೆ ಮೋಡಗಳಂತೆ ನಿನ್ನ ಜೀವನದಲ್ಲಿ ಕಷ್ಟಗಳು ತುಂಬಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು. ಅಧ್ಯಾಯವನ್ನು ನೋಡಿ |