ಪ್ರಸಂಗಿ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬೊಗ್ಗುವರು, ಅರೆಯುವವರು ಕೊಂಚವಾದದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸಮಯದಲ್ಲಿ, ನಿನ್ನ ಬಲಿಷ್ಠವಾದ ತೋಳುಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ; ನಿನ್ನ ಬಲಿಷ್ಠವಾದ ಕಾಲುಗಳು ಬಲಹೀನವಾಗಿ ಬಗ್ಗಿಹೋಗುತ್ತವೆ; ನಿನ್ನ ಹಲ್ಲುಗಳು ಬಿದ್ದುಹೋಗುತ್ತವೆ; ಆಗ ನೀನು ಆಹಾರವನ್ನು ಅಗಿದು ತಿನ್ನಲಾರೆ. ನಿನ್ನ ಕಣ್ಣುಗಳು ಮೊಬ್ಬಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. ಅಧ್ಯಾಯವನ್ನು ನೋಡಿ |