Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ ಎಂದು ಪ್ರಸಂಗಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿಯೊಂದು ಉಪಯೋಗವಿಲ್ಲದ್ದು! ಪ್ರಸಂಗಿಯು ಹೇಳುವುದೇನೆಂದರೆ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:8
10 ತಿಳಿವುಗಳ ಹೋಲಿಕೆ  

ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.


ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.


ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು