Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವಂತೆ ಜ್ಞಾನವೂ ಮೂಢತ್ವಕ್ಕಿಂತ ಶ್ರೇಷ್ಠವೆಂದು ಗೋಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:13
17 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!


ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.


ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.


ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು