Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಾನು - ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುವದು; ನನ್ನ ಹೆಚ್ಚು ಜ್ಞಾನದಿಂದೇನು? ಇದೂ ವ್ಯರ್ಥವಲ್ಲವೆ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನಾನು ನನ್ನ ಮನಸ್ಸಿನಲ್ಲಿ, “ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುತ್ತದೆ. ನಾನು ಜ್ಞಾನಿಯಾಗುವುದರಿಂದ ಲಾಭವೇನು?” “ಇದು ಸಹ ವ್ಯರ್ಥವೇ,” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:15
9 ತಿಳಿವುಗಳ ಹೋಲಿಕೆ  

ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.


ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.


ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು