Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆಲ್ಲಾ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:18
19 ತಿಳಿವುಗಳ ಹೋಲಿಕೆ  

ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.


ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.


ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.


ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.


ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.


ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು