Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:21
15 ತಿಳಿವುಗಳ ಹೋಲಿಕೆ  

ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.


ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು