Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕಾಶದ ಕೆಳಗೆ ನರಜನ್ಮದವರು ಅಲ್ಪಾಯುಷ್ಯದಲ್ಲಿ ಏನು ಮಾಡುವದು ಯುಕ್ತವೆಂದು ನಾನು ತಿಳಿದುಕೊಳ್ಳುವದಕ್ಕೋಸ್ಕರ ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಉತ್ತೇಜನಮಾಡುವದಕ್ಕೂ ಬುದ್ಧಿಹೀನತೆಯನ್ನು ಅವಲಂಬಿಸುವದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:3
22 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.


ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.


ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.


ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು