Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:4
17 ತಿಳಿವುಗಳ ಹೋಲಿಕೆ  

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.


ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.


ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.


ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.


ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,


ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,


ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು