Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು; ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಹೆಚ್ಚು ಅಭಿವೃದ್ಧಿಹೊಂದಿ, ಶ್ರೀಮಂತನಾದೆನು. ಇದೆಲ್ಲದರಲ್ಲಿ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:9
8 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.


ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.


ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು