ಪ್ರಸಂಗಿ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿ |