Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಕೆಲಸವನ್ನು ಸಂತೋಷದಿಂದ ಮಾಡುವುದು ದೇವರಿಗೆ ಇಷ್ಟವಾಗಿದೆ. ಅವು ದೇವರ ವರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:13
14 ತಿಳಿವುಗಳ ಹೋಲಿಕೆ  

ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.


ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?


ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು