Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:14
30 ತಿಳಿವುಗಳ ಹೋಲಿಕೆ  

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.


ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು