Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:16
15 ತಿಳಿವುಗಳ ಹೋಲಿಕೆ  

ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.


ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.


ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು