Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:18
16 ತಿಳಿವುಗಳ ಹೋಲಿಕೆ  

ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.


ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.


ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.


ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು