ಪ್ರಸಂಗಿ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ. ಅಧ್ಯಾಯವನ್ನು ನೋಡಿ |