Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹುಟ್ಟುವ ಸಮಯ, ಸಾಯುವ ಸಮಯ. ನೆಡುವ ಸಮಯ, ಸಸಿಗಳನ್ನು ಕೀಳುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:2
36 ತಿಳಿವುಗಳ ಹೋಲಿಕೆ  

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.


ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.


ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.


ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.


“ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.


ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.


ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.


ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.


“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.


ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.


ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.


ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.


ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.


ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು