ಪ್ರಸಂಗಿ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು? ಅಧ್ಯಾಯವನ್ನು ನೋಡಿ |