Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪುವ ಸಮಯ, ಅಪ್ಪದಿರುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಯುಧಗಳನ್ನು ಬಿಸಾಡುವ ಸಮಯ, ಆಯುಧಗಳನ್ನು ಎತ್ತಿಕೊಳ್ಳುವ ಸಮಯ. ಅಪ್ಪಿಕೊಳ್ಳುವ ಸಮಯ, ಅಪ್ಪಿಕೊಳ್ಳದಿರುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:5
11 ತಿಳಿವುಗಳ ಹೋಲಿಕೆ  

ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.


ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.


ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.


ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು