Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:6
22 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.


ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?


ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.


ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.


ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,


ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು