ಪ್ರಸಂಗಿ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.