Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವನ ಅಧಿಪತ್ಯಕ್ಕೆ ಒಳಪಟ್ಟ ಜನಜಂಗುಳಿಯ ಸಂಖ್ಯೆ ಅಪಾರವಾಗಿತ್ತು. ಇವನ ನಂತರ ಬಂದವರಾದರೋ ಇವನ ಬಗ್ಗೆ ಅಭಿಮಾನ ತೋರಲಿಲ್ಲ. ಇದು ಸಹ ವ್ಯರ್ಥ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನ ಆಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಇವನ ಆಳಿಕೆಯ ಕೊನೆಗಾಲದವರಾದರೋ ಇವನಲ್ಲಿ ಆನಂದಿಸಲಿಲ್ಲ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:16
12 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.


ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು