Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:3
11 ತಿಳಿವುಗಳ ಹೋಲಿಕೆ  

ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.


ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.


ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು