Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:4
19 ತಿಳಿವುಗಳ ಹೋಲಿಕೆ  

ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?


ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.


ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


“ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು