Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೈಕಟ್ಟಿಕೊಂಡು ಕುಳಿತುಕೊಳ್ಳುವ ಮೈಗಳ್ಳನಾದ ಮೂಢನಿಗೆ ಅವನ ಒಡಲೇ ಊಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೂಢನು ಅಪ್ಪುಗೈ ಮಾಡಿಕೊಂಡು ತನ್ನ ಮಾಂಸವನ್ನು ತಾನೇ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:5
10 ತಿಳಿವುಗಳ ಹೋಲಿಕೆ  

ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.


ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.


ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.


ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.


ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು