ಪ್ರಸಂಗಿ 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ. ಅಧ್ಯಾಯವನ್ನು ನೋಡಿ |