Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:8
60 ತಿಳಿವುಗಳ ಹೋಲಿಕೆ  

ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.


ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಆಶೀರ್ವಾದದ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.


ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.


ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?


ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.


ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.


ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.


ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು