Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:10
18 ತಿಳಿವುಗಳ ಹೋಲಿಕೆ  

ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು