Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾತು ಹೆಚ್ಚಿದಷ್ಟೂ ಪರಿಣಾಮ ಕಡಿಮೆ. ಅದರಿಂದ ಮನುಷ್ಯನಿಗಾಗುವ ಪ್ರಯೋಜನವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿರರ್ಥಕವಾದ ಮಾತುಗಳು ಬಹಳ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಾತು ಹೆಚ್ಚಿದಷ್ಟೂ, ಕಡಿಮೆ ಅರ್ಥೈಸುತ್ತವೆ, ಅದರಿಂದ ಯಾರಿಗೆ ಏನು ಲಾಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:11
13 ತಿಳಿವುಗಳ ಹೋಲಿಕೆ  

ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.


ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.


ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.


ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.


ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು