Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:2
24 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.


ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.


ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,


ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು