ಪ್ರಸಂಗಿ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ. ಅಧ್ಯಾಯವನ್ನು ನೋಡಿ |