Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಿಂದಿನ ಕಾಲ ಈ ಕಾಲಕ್ಕಿಂತ ಮೇಲಾದುದಕ್ಕೆ ಕಾರಣ ಕೇಳಬೇಡ; ಇದು ಬುದ್ಧಿವಂತನು ಕೇಳುವ ಪ್ರಶ್ನೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ; ನೀನು ಈ ವಿಷಯದಲ್ಲಿ ವಿಚಾರಿಸುವದು ಜ್ಞಾನಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:10
9 ತಿಳಿವುಗಳ ಹೋಲಿಕೆ  

ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು